ಬೆಂಗಳೂರು: ಕಂಡಕ್ಟರ್ ತಲೆಗೆ ಕಲ್ಲು ಬೀಸಿ ಎಸ್ಕೇಪ್ ಆಗಲು ಯತ್ನಿಸಿದ್ದ ಘಟನೆ ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ KA-14 F1107 ನಂಬರಿನ ಬಿಎಂಟಿಸಿ ಬಸ್ನಲ್ಲಿ ಈ ಘಟನೆ ನಡೆದಿದೆ.
ಇದರ ಜೊತೆಗೆ 3 ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು. ಆ ವೇಳೆ ಪ್ರಯಾಣಿಕ ಕಂಡಕ್ಟರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಎಸ್ಕೇಪ್ ಆಗಿದ್ದ. ಇದಕ್ಕಾಗಿ ಆರೋಪಿ ಹೇಮಂತ್ ಎಂಬಾತ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು 3 ದಿನಗಳಿಂದ ಹೊಂಚು ಹಾಕಿದ್ದ.
ಅಕ್ಟೋಬರ್ 18ರ ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಸ್ ಸ್ಟ್ಯಾಂಡ್ ನಲ್ಲಿ ಊಟ ಮಾಡುತ್ತಿರುವ ವೇಳೆ ಆರೋಪಿ ಹೇಮಂತ್ ದೊಡ್ಡದಾದ ಕಲ್ಲಿನಿಂದ ಕಂಡಕ್ಟರ್ ಸಂಗಪ್ಪನ ತಲೆಗೆ ಹೊಡೆದು ಎಸ್ಕೇಪ್ ಆಗಿದ್ದ. ನಂತರ ಪ್ರಯಾಣಿಕರು ಆತನನ್ನು ಹಿಡಿದು ಪೋಲಿಸರ ವಶಕ್ಕೆ ನೀಡಿದ್ದಾರೆ.
ಇದರಿಂದ ಕಂಡಕ್ಟರ್ಗಳು ತಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಎರಡು ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿರುವ 3 ಘಟನೆ ನಡೆದಿದೆ.
ಸೆಪ್ಟೆಂಬರ್ 8ರಂದು ಅತ್ತಿಬೆಲೆಯಿಂದ ಮೆಜೆಸ್ಟಿಕ್ ಬರುತ್ತಿದ್ದ ವೋಲ್ವೋ ಬಸ್ನಲ್ಲಿ ಹೊಸ ರೋಡ್ ಬಸ್ ಸ್ಟಾಪ್ನಲ್ಲಿ ಕಂಡಕ್ಟರ್ಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಲು ಮುಂದಾಗಿದ್ದ. ಅಕ್ಟೋಬರ್ 1ರಂದು ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಹರ್ಷ ಸಿನ್ಹಾ ಅನ್ನೋ ಯುವಕ 2-3 ಬಾರಿ ಚಾಕುವಿನಿಂದ ಚುಚ್ಚಿ ಕೊಲ್ಲಲು ಯತ್ನಿಸಿದ್ದ.

