ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ: ಬಸವರಾಜ ಬೊಮ್ಮಾಯಿ

Share It

ಸರ್ಕಾರ ರೈತರಿಗೆ ನೀಡಿರುವ ನೊಟೀಸ್ ವಾಪಸ್ ಪಡೆದು ರಾಜ್ಯದ ಎಲ್ಲ ದಾಖಲೆಗಳ ಪರಿಶೀಲನೆ ಮಾಡಬೇಕು: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಪ್ ಪ್ರಾಪರ್ಟಿ ಅಂತ ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದೆ. ಕಂದಾಯ ಕಾನೂನು ಕಡೆಗಣಿಸಿದ್ದಾರೆ. ಭೂಮಿ ವಿಚಾರದಲ್ಲಿ ಕಂದಾಯ ಕಾನೂನು ದಾಖಲೆಗಳೇ ಅಂತಿಮ. ಆದರೆ, ಆ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಅಂತ ಮಾಡುತ್ತಿದ್ದಾರೆ.

ಹಿಂದೆ ಇಂತಹ ಪ್ರಕರಣ ಆದಾಗ ಯಾರ್್ಯಾರು ನ್ಯಾಯಾಲಯಕ್ಕೆ ಹೋಗಿದ್ದಾರೆ ಅವರಿಗೆಲ್ಲ ನ್ಯಾಯ ಸಿಕ್ಕಿದೆ. ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ, ಗಾಬರಿ ಉಂಟು ಮಾಡುವ ಕೆಲಸ ನಡೆದಿದೆ. ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಗೆಜೆಟ್ ನೋಟಿಫಿಕೇಶನ್ ಆದ ಬಳಿಕ ತರಾತುರಿಯಲ್ಲಿ ಡಿಸಿಗಳು ಕಾರ್ಯ ಪೃವೃತ್ತರಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಅವರಿಗೆ ಅಷ್ಟಾದರೂ ಜ್ಞಾನ ಇರಬೇಕಲ್ವಾ? ಮೊದಲು ಇದರ ಬಗ್ಗೆ ಸಮಗ್ರವಾಗಿ ಪರಿಶೀಲನೆ ಆಗಬೇಕು. ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದ ಗಲಾಟೆಗೆ ಸರ್ಕಾರವೇ ನೇರ ಕಾರಣ. ಜನರ ಮೇಲೆ‌ ಕಾನೂನು ಹೇರುವ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಜೀವನ ನಡೆಸುತ್ತಾರೆ. ಸೌಹಾರ್ದತೆ ಕಲುಕುವ ಕೆಲಸ ನಡೆದಿದೆ, ಈ ಸರ್ಕಾರ ಬಂದಾಗಿನಿಂದ ತುಷ್ಟೀಕರಣ ನಡೆದಿದೆ.

ಮುಖ್ಯಮಂತ್ರಿಗಳು ರೈತರಿಗೆ ನೀಡಿರುವ ನೊಟೀಸ್ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಆದರೆ, ಇನ್ನೂ ವಾಪಸ್ ಪಡೆಯುವ ಕೆಲಸ ಆಗಿಲ್ಲ. ಸಿಎಂ ನೇರವಾಗಿ ಮದ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.
ಈಗ ಒಂದು ಕಡೆ ಎಲ್ಲಿಯಾದರೂ ಪೂಜೆ ಮಾಡಿ ನಮ್ಮದೇ ಭೂಮಿ ಅಂದರೆ ಹೇಗೆ? ಇಲ್ಲಿಯ ಕೃಷ್ಣಾ ನಗರ ತಾಂಡಾ ವಕ್ಪ್ ಪ್ರಾಪರ್ಟಿ ಅಂತ ಮಾಡಿದ್ದಾರೆ. ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ನಾಯಕತ್ವ ಭಪಡಿಸಿಕೊಳ್ಳಲು‌ ಸಿಎಂ ಅವರಿಂದ ತುಷ್ಟೀಕರಣ ರಾಜಕೀಯ ನಡೆದಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಎಲೆಕ್ಷನ್ ಇರಲಿ, ಇರದೇ ಇರಲಿ ತುಷ್ಟೀಕತಣ ನಡೆದೇ ಇದೆ. ಈಗ ಉಪ ಚುನಾವಣೆಯಲ್ಲಿ ಲಾಭ‌ ಪಡೆಯುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಶಕ್ತಿ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಗ್ಯಾರಂಟಿ ಯೋಜನೆಗಳು ಅವತ್ತು ಚುನಾವಣೆಗಾಗಿ ರಾಜಕೀಯ ಲಾಭಕ್ಕಾಗಿ ಮಾಡಿದ್ದು, ಇದಕ್ಕೆ ಯಾವುದೇ ಪೂರ್ವ ತಯಾರಿ ಇರಲಿಲ್ಲ. ಜನಪ್ರಿಯತೆಗೆ ಮಾಡಿದ್ದಾರೆ. ಈಗ ಅವರ ಹಣಕಾಸಿ ಪರಿಸ್ಥಿತಿ ಸರಿಯುಲ್ಲ. ಅವರ ಶಾಸಕರೇ ಅವರನ್ನು ದೂರುತ್ತಿದ್ದಾರೆ. ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗ್ಯಾರೆಂಟಿ ಪರಿಕ್ಷರಣೆ ಮಾಡುವುದಾಗಿ ಹೇಳುತ್ತಿದ್ದಾರೆ ಎಂದರು.


Share It
Previous post

ಕೇರಳಕ್ಕೂ ಮಾದರಿಯಾದ ‘ಶಕ್ತಿ ಯೋಜನೆ’ : ಆದರೆ, ತಿರುವನಂತಪುರದ ಹಿರಿಯ ನಾಗರಿಕರಿಷ್ಟೇ KSRTCಯಲ್ಲಿ ಉಚಿತ ಪ್ರಯಾಣ !

Next post

ಸೂರ್ಯ ಕಿರಣದಲಿ ಭೂತಕನ್ನಡಿ ನಡುವೆ ಮೂಡಿದ ರಾಷ್ಟ್ರಪತಿ ಭಾವಚಿತ್ರ: ಉಡುಪಿ ಕಲಾವಿದನಿಗೆ ಮೆಚ್ಚುಗೆ

You May Have Missed

You cannot copy content of this page