ಶಕ್ತಿ ಯೋಜನೆ ವಿಚಾರದಲ್ಲಿ ಗೊಂದಲ ಸೃಷ್ಡಿಸುವ ಪ್ರಯತ್ನ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

KSRTC
Share It


ಬೆಂಗಳೂರು: ಶಕ್ತಿ ಯೋಜನೆ ಮುಂದುವರಿಸುವುದು ಸಾರಿಗೆ ಇಲಾಖೆಗೆ ಕಷ್ಟವಾಗುತ್ತಿದೆ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ, ಸುಖಾಸುಮ್ಮನೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಬೇಕು ಎಂದು ತಿಳಿಸಿದ್ದಾರೆ.


Share It

You cannot copy content of this page