ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ: ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು

IMG-20241106-WA0016
Share It

ಮೈಸೂರು: ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ ನಡೆಸಿದರು.

ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸುತ್ತಿದ್ದಂತೆ ಪೊಲೀಸರು ಬಂಧಿಸಲು ಯತ್ನಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪ್ರತಿಭಟನಾಕಾರರ ವಾಹನವನ್ನು ಕೂಡ ಸೀಜ್ ಮಾಡಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಶಾಸಕ ಶ್ರೀವತ್ಸ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.


Share It

You cannot copy content of this page