ಹಾಸನ: ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಬುಗಿಲೆದಿದ್ದ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಗೊಂಡಿದೆ.
ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮ ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಕಾಲೇಜು ನಿಯಮದಂತೆ ಶಿಸ್ತಿನಿಂದ ಇರಬೇಕೆಂದು ಹೇಳಿದರು. ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ ಎಂದಿದ್ದಾರೆ.
ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ ಎಂದು ಜಮ್ಮು-ಕಾಶ್ಮೀರದಿಂದ ಬಂದಿರುವ ವಿದ್ಯಾರ್ಥಿ ಉಮರ್ ತಿಳಿಸಿದ್ದಾರೆ. ನಮ್ಮ ಮೇಲೆ ಯಾರೂ ಒತ್ತಡ ಹೇರಿಲ್ಲ. ಶಿಸ್ತಿನ ವಿಚಾರದಲ್ಲಿ ಗಡ್ಡ ಟ್ರಿಮ್ ಮಾಡಲು ಹೇಳಿದ್ದರು.
ಗಡ್ಡದ ವಿಚಾರ ಬಿಟ್ಟರೆ ಬೇರೆ ಏನೂ ಸಮಸ್ಯೆ ಆಗಿಲ್ಲ. ತಾರತಮ್ಯ ಮಾಡಿರುವ ಬಗ್ಗೆ ಯಾವುದೇ ವಿಚಾರ ಇಲ್ಲ. ಈಗ ಸಮಸ್ಯೆ ಬಗೆ ಹರಿದಿದೆ, ಏನೂ ಸಮಸ್ಯೆ ಇಲ್ಲ. ನಮ್ಮ ಸಂಪ್ರದಾಯ ಪಾಲನೆಗೆ ಅಡ್ಡಿ ಇಲ್ಲ ಎಂದು ತಿಳಿಸಿದರು.