ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆಳತಿ, ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆ.27 ಕ್ಕೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ನಗರದ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅದರೆ ಕೋರ್ಟ್ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ಜಾಮೀನು ಅರ್ಜಿಗೆ ಎಸ್.ಪಿ.ಪಿ ಆಕ್ಷೇಪಣೆ ಸಲ್ಲಿಸಿದರು.
ಜಾಮೀನು ನೀಡದಂತೆ ಎಸ್.ಪಿ.ಪಿ ಆಕ್ಷೇಪಣೆ ಸಲ್ಲಿಸಿದ್ದರಿಂದ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನ ಆಗಸ್ಟ್ 27ಕ್ಕೆ ಮುಂದೂಡಿ ನ್ಯಾಯಾಧೀಶರಾದ ಜೈಶಂಕರ್ ಆದೇಶಿಸಿದರು.
ಇದೇ ವೇಳೆ ಪ್ರಕರಣದಲ್ಲಿ ಎ7 ಆರೋಪಿಯಾಗಿರುವ ಮನುಕುಮಾರ್ ಜಾಮೀನು ಅರ್ಜಿಯನ್ನೂ ಕೂಡ ಮುಂದೂಡಲಾಗಿದೆ.