“300 ಕೋಟಿ ಮೌಲ್ಯದ ಸರಕಾರಿ ಆಸ್ತಿ ಕಬಳಿಕೆ: ವಿರುದ್ಧ ದೂರು
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ”ದಯಾನಂದ ಸಾಗರ್ ವಿದ್ಯಾ ಸಂಸ್ಥೆ”ಗೆ ಹೊಂದಿಕೊಂಡಂತೆ ಇರುವ 280 ಕೋಟಿ ಮೌಲ್ಯದ 4.10 ಎಕರೆ ವಿಸ್ತೀರ್ಣದ ಸರ್ಕಾರಿ ಸ್ವತ್ತು ಕಬಳಿಕೆಯಾಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಬಿಡಿಎ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಕುಮಾರಸ್ವಾಮಿ ಬಡಾವಣೆಯ 4.10 ಎಕರೆ ವಿಸ್ತೀರ್ಣದ ಸ್ವತ್ತು ವಾಸ್ತವವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ವತ್ತಾಗಿರುತ್ತದೆ. H. S. ಹರಿಕೃಷ್ಣ ಎಂಬ ವ್ಯಕ್ತಿ ಪ್ರಭಾವ ಬಳಸಿ, ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಹರಿಕೃಷ್ಣ ಸೇರಿ ಎಲ್ಲಾ ಸರ್ಕಾರಿ ನೆಲಗಳ್ಳರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರು, ಆಡಳಿತಾಧಿಕಾರಿಗಳು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಲ್ಲಿ ವಿನಂತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯಾಯಾಲಯ ಮೂಲ ದಾವೆಯನ್ನು ರದ್ದುಗೊಳಿಸಿ, ಜಮೀನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆತನ ಅಕ್ರಮದ ಬಗ್ಗೆ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.