6,543 ಕೋಟಿ ಅನುದಾನ ಬಿಡುಗಡೆ ಮಾಡಿದವರಿಗೆ 414 ಕೋಟಿ ಬಿಡುಗಡೆ ಕಷ್ಟವೇ?: ಬಿಜೆಪಿಯ ಟ್ವೀಟ್ ಗೆ ರಾಮಲಿಂಗಾ ರೆಡ್ಡಿ ತಿರುಗೇಟು

Share It


ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ಎಂದು ಬಿಜೆಪಿ ಟ್ವೀಟ್ ಗೆ ಸಚಿವ ರಾಮಲಿಂಗಾ ರೆಡ್ಡಿ ಕೌಂಟರ್ ಕೊಟ್ಟಿದ್ದಾರೆ.

ಸರಕಾರ KSRTCಗೆ 414 ಕೋಟಿ ಅನುದಾನ ಬಾಕಿ ಉಳಿಸಿಕೊಂಡಿದೆ ಎಂಬ ಬಿಜೆಪಿ ಆರೋಪಕ್ಕೆ ಟಾಂಗ್ ನೀಡಿರುವ ಅವರು, ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ. ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್​ಆರ್​ಟಿಸಿಗೆ – ರೂ‌‌.2481 ಕೋಟಿ , ಬಿಎಂಟಿಸಿಗೆ – ರೂ. 1126 ಕೋಟಿ ., ವಾಯುವ್ಯ ಸಾರಿಗೆಗೆ – ರೂ 1613 ಕೋಟಿ . ಕಲ್ಯಾಣ ಕರ್ನಾಟಕ ಸಾರಿಗೆಗೆ- ರೂ 1321 ಕೋಟಿ ರೂ. ಅನುದಾನ, ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ರೂ 6543 ಕೋಟಿ ಅನುದಾನವನ್ನು ಸರ್ಕಾರ 2023ರ ಜೂನ್​​ನಿಂದ 2024ರ ನವೆಂಬರ್​​ವರೆಗೆ ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ಈವರೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ನಮಗೆ ರೂ‌ 414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ? ತಮ್ಮ ಬಿ.ಜೆ.ಪಿ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಂದಿದ್ದಾರೆ.

2023 ಮಾರ್ಚ್ ನಲ್ಲಿ , 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಜೆ ಬೇಕಾದ ಅನುದಾನವನ್ನು ನೀಡದೆ, ನಿವೃತ್ತಿ‌ ಹೊಂದಿದ 11694 ಸಿಬ್ನಂದಿಗಳಿಗೆ ತಮ್ಮ ಕಾಲದ ಉಪಧನ ಮತ್ತು ಗಳಿಕೆ ರಜೆ ಬಾಕಿ ಹಣ ರೂ. 224.05 ಕೋಟಿ ನಾವು ಎರಡು ದಿನದ ಹಿಂದೆ ಪಾವತಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ತಮ್ಮ ದುರಾಡಳಿತಕ್ಕೆ ಇದಕ್ಕಿಂತ ಬೇರೆ ಕೈಗನ್ನಡಿಯ ಅವಶ್ಯಕತೆ ಇದೆಯೇ? ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ, ಶೂನ್ಯ ಅಭಿವೃದ್ಧಿ ಕಾರ್ಯ,‌ ಶೂನ್ಯ ಸಾಧನೆಗೆ ಹಾಗೂ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದ ತಮ್ಮ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ ಎಂದು ತಿರುಗೇಟು ನೀಡಿದ್ದಾರೆ.


Share It

You May Have Missed

You cannot copy content of this page