ಉಪಯುಕ್ತ ಸುದ್ದಿ

ನ.9ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Share It

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ನ.9ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 2 ದಿನಗಳ ಕಾಲ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶೋರಾಪುರ, ಹುಣಸೂರು, ಕೋಲಾರ, ಪೊನ್ನಂಪೇಟೆ, ಕೆಆರ್​ನಗರ, ಮಹಾಲಿಂಗಪುರ, ಯಡ್ರಾಮಿ ಸೈದಾಪುರ, ಬಸವನ ಬಾಗೇವಾಡಿ, ನಾಗಮಂಗಲದಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Share It

You cannot copy content of this page