ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವಿ.ಸೋಮಣ್ಣ ಅವರಿಗೆ ನೀಡಿದರೆ ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿಜೆಪಿ ಮುಖಂಡ ತೋಟದಪ್ಪ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಹೊರಗಿನಿಂದ ಬಂದವರಿಗೆ ನೀಡಿದರೆ ನಿಷ್ಠಾವಂತ ಕಾರ್ಯಕರ್ತರಿಗೆ ಅವಮಾನ ಮಾಡಿದಂತಾಗುತ್ತದೆ.
ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡಲೇಬೇಕೆಂದರೆ ಮೂಲ ಬಿಜೆಪಿ ಮುಖಂಡರಾದ ಮಾಜಿ ಡಿಸಿಎಂ ಬಿ.ಶ್ರೀರಾಮುಲು ಅಥವಾ ದಿವಂಗತ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.