ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಾಳೆ ಮತ್ತು ನಾಳಿದ್ದು ಬೆಂಗಳೂರಿನಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜೊತೆಗೆ ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು, ಸಂಸದರು ಪಾಲ್ಗೊಳ್ಳಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಹಾಗೂ ಹೋಟೆಲ್ ಶಾಂಗ್ರಿಲಾದಲ್ಲಿ ನಾಳಿದ್ದು ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ.