ಅಳಂದ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಆಳಂದ ಪಟ್ಟಣದಲ್ಲಿ ರೂ. 5 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಳಂದ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ 36 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ಅನುಕಂಪ ಆಧಾರದ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲಾಯಿತು.
ಬಸ್ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಪ್ರಯಾಣಿಕರ ಕುಟುಂಬದವರಿಗೆ ರೂ10 ಲಕ್ಷಗಳ ಚೆಕ್ ಅನ್ನು ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮಗಳಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಸಾಗರ್ ಖಂಡ್ರೆ, ಶಾಸಕರಾದ ಬಿ.ಆರ್. ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ್, ವ್ಯವಸ್ಥಾಪಕ ನಿರ್ದೇಶಕರಾದ ಬಿ. ಸುಶೀಲಾ, ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲಕುಮಾರ್ ಚಂದರಗಿ, ಸೇರಿದಂತೆ ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.