ಮಂಗಳೂರು: ೧೯೯೮ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ೨೬ ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದಿದು. ಚಂದ್ರಹಾಸ್ ಕೇಶವ ಶೆಟ್ಟಿ ದುಬೈನಿಂದ ಊರಿಗೆ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಆ.೩೦ರಂದು ಬಂಧಿಸಲಾಗಿದೆ.
೩೧-೧೨-೧೯೯೮ರAದು ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದು, ಹಿಂದಿನ ತನಿಖಾಧಿಕಾರಿಗಳು ಇವರು ತಲೆಮರೆಸಿಕೊಂಡಿರುವ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಲೀಲಾಧರ್ ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಬಂಧಿಸಲಾಗಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಅದೇ ರೀತಿ ಚಂದ್ರಹಾಸ್ ಕೇಶವ ಶೆಟ್ಟಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿAದ ಇಬ್ಬರ ವಿರುದ್ಧ ಪ್ರತ್ಯೇಕವಾಗಿ ೮೮/೨೦೨೫ ಮತ್ತು ೯೪/೨೦೨೫ ಕಲಂ ೨೦೮, ೨೦೯ ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.