ಮೈಸೂರು: ಸಾಹಿತಿ ಎಸ್.ಎಲ್ ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಿತು.
ಎಸ್.ಎಲ್ ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ರಾಷ್ಟçಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಕೆ ಮಾಡಿದರು. ಹಲವು ಗಣ್ಯರಿಂದ ಗೌರವ ಸಮರ್ಪಣೆ ಮಾಡಿದ್ದು, ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆ ಮಾಡಲಾಯಿತು.
ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿವೆ. ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ವಿಲ್ ನಲ್ಲಿ ನಮೂದಿಸಿದ್ದ ಸಹನಾ ವಿಜಯ್ ಕುಮಾರ್ ರಿಂದ ಅಗ್ನಿಸ್ಪರ್ಶ ಮಾಡಲಾಗಿದೆ.
ಸಕಲ ಸರ್ಕಾರಿ ಗೌರವ: ಭೈರಪ್ಪ ಅವರ ಅಂತ್ಯ ಸಂಸ್ಕಾರಕ್ಕೂ ಮುನ್ನ ಬಂದೂಕು ಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ಗೌರವ ವಂದನೆ ನಡೆಯಿತು. ಸರ್ಕಾರಿ ಗೌರವದ ಬಳಿಕ ತ್ರಿವರ್ಣ ಧ್ವಜ ಹಸ್ತಾಂತರ ಮಾಡಲಾಯಿತು.
ಭೈರಪ್ಪ ಮಕ್ಕಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ತ್ರಿವರ್ಣ ಧ್ವಜ ಹಸ್ತಾಂತರ ಮಾಡಿದರು. ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಎಡಿಸಿ ಶಿವರಾಜು ಸೇರಿದಂತೆ ಅಧಿಕಾರಿ ವರ್ಗ ಭಾಗಿಯಾಗಿತ್ತು.