ಉಪಯುಕ್ತ ಸುದ್ದಿ

KSRTCಯ ‘ಶಕ್ತಿ ಯೋಜನೆ’ಯಿಂದ ಮತ್ತೊಂದು ವಿಶ್ವದಾಖಲೆ: ಮಹಿಳಾ ಸಬಲೀಕರಣಕ್ಕೆ ಮನ್ನಣೆ

Share It

ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ‌ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ 500 ಕೋಟಿ‌ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

International Book of Records  – World Record of Excellence ದಾಖಲೆಗೆ KSRTC ಭಾಜನವಾಗಿದ್ದು, ಈಗಾಗಲೇ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ‌ ಸಮಸ್ತ ಅಧಿಕಾರಿ/ಸಿಬ್ಬಂದಿಗೆ ಹಾಗೂ ಕಾರ್ಮಿಕ ಮುಖಂಡರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ‌ಸಾಮಾಜಿಕ‌ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ‌. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಇದರೊಂದಿಗೆ ಮತ್ತೊಂದು ವಿಶ್ವ ದಾಖಲೆಗೆ  ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದ ಸಚಿವರು, ಮಹಿಳಾ ಪ್ರಯಾಣಿಕರಿಗೂ ಅಭಿನಂದನೆ ಸಲ್ಲಿಸಿದ್ದಾರೆ.


Share It

You cannot copy content of this page