ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು.
ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಜನರಲ್ ವಾರ್ಡ್ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಖರ್ಗೆಯವರಿಗೆ ವೈದ್ಯರು ನಿತ್ಯದ ಚೆಕ್ ಅಪ್ ಮಾಡಿಸಿದ್ದಾರೆ.