ಕೊಪ್ಪಳ: ದೇವಿಕ್ಯಾಂಪ್ನಿAದ ಗಂಗಾವತಿಗೆ ಬೈಕ್ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಭೀಕರ ಹತ್ಯೆ ಮಾಡಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(೩೧) ಕೊಲೆಯಾದ ದುರ್ದೈವಿ.
ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊAಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ವೆಂಕಟೇಶ್ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಂಗಾವತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಬಂದ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ.
ಹಳೇ ದ್ವೇಷಕ್ಕೆ ಕೊಲೆ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಹಿಂದೆ ಹಳೇ ದ್ವೇಷವಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ ಕುರುಬರ ಸ್ನೇಹಿತರು ರವಿ ಎಂಬಾತನ ಮೇಲೆ ಕೊಲೆ ಆರೋಪ ಹೊರಿಸಿದ್ದಾರೆ. ವೆಂಕಟೇಶ್ ಹಾಗೂ ರವಿ ಮದ್ಯೆ ಕಳೆದ ಏಳೆಂಟು ವರ್ಷಗಳಿಂದ ದ್ವೇಷವಿದ್ದು, ನಾಯಕತ್ವದ ವಿಚಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಏರಿಯಾ ಕಂಟ್ರೋಲ್ ವಿಚಾರಕ್ಕೂ ವೆಂಕಟೇಶ್ ನಡುವೆ ಭಿನ್ನಾಭಿಪ್ರಾಯವಿತ್ತು. ಇದೇ ಕಾರಣದಿಂದ ರವಿ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.