ಅಪರಾಧ ಸುದ್ದಿ

ಗೋವಾದಿಂದ ಅಕ್ರಮ ಮದ್ಯ ಸಾಗಾಟ : 3.63 ಲಕ್ಷ ಮೌಲ್ಯದ ಮದ್ಯ ವಶ

Share It

ಕಾರವಾರ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಕಾರವಾರದ ಅಬಕಾರಿ ಇಲಾಖೆ ಅಧಿಕಾರಿಗಳು ಭೇದಿಸಿದ್ದು, ಸುಮಾರು ರೂ. 3.62 ಲಕ್ಷ ಮೌಲ್ಯದ ಮದ್ಯ ಮತ್ತು ರೂ. 4 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತಾಲೂಕಿನ ಮುಡಗೇರಿ ಡ್ಯಾಮ್ ಹತ್ತಿರದ ಅರಣ್ಯ ಪ್ರದೇಶದಲ್ಲಿ ಗಸ್ತು ನಡೆಸಿದರು. ಈ ವೇಳೆ ಐದು ದ್ವಿಚಕ್ರ ವಾಹನಗಳಲ್ಲಿ ಭಾರೀ ಪ್ರಮಾಣದ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದರು.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆಯೇ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳು ವಾಹನಗಳನ್ನು ಅಲ್ಲೇ ಬಿಟ್ಟು ಕಾಲ್ಕಿತ್ತಿದ್ದು, ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


Share It

You cannot copy content of this page