ರಾಜಕೀಯ ಸುದ್ದಿ

ಮೈಸೂರಿನಲ್ಲಿ ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ಸಾವು

Share It

ಮೈಸೂರು: ಬೆಂಗಳೂರಿನ ಚಿಕ್ಕ ಪೇಟೆಯ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಮ್ಮ ಜನ್ಮದಿನದ ಅಂಗವಾಗಿ ಅವರು ಚಾಮುಂಡೇಶ್ವರಿ ದರ್ಶನ ಪಡೆಯುವ ಸಲುವಾಗಿ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಡಿ.3 ರಂದು ಅವರ ಜನ್ಮದಿನವಿದ್ದ ಕಾರಣಕ್ಕೆ ಅವರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ್ದರು.

ಸಂಜೆ 7 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅವರು ಅಮಾರೋಗ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆ ಚೇತರಿಸಿಕೊಂಡಿದ್ದರು. ಕಾಂಗ್ರೆಸ್ ನ ಚಿಕ್ಕಪೇಟೆ ಕ್ಷೇತ್ರದ ಅಭ್ಯರ್ಥಿ ಸಹ ಆಗಿದ್ದ ದೇವರಾಜ್, ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.


Share It

You cannot copy content of this page