ಜೈಲುಗಳಲ್ಲಿ ಅಕ್ರಮ ಕಡಿವಾಣಕ್ಕೆ ದಿಟ್ಟಕ್ರಮ : ಕಾರಾಗೃಹ ಎಡಿಜಿಪಿಯಾಗಿ ಅಲೋಕ್ ಕುಮಾರ್ ನೇಮಕ
ಬೆಂಗಳೂರು: ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ನೇಮಕಗೊಳಿಸಲಾಗಿದೆ.
ಇದೇ ವೇಳೆ, ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.


