ಬೆಂಗಳೂರು: KSRTC ಬಸ್ ಗಳ ಅಪಘಾತದ ಸಂದರ್ಭದಲ್ಲಿ ತುರ್ತು ಸ್ಪಂದನೆಗೆ ನಿಯೋಜನೆಗೊಂಡಿರುವ ಎರಡು ತುರ್ತು ಸ್ಪಂದನಾ ವಾಹನಗಳಿಗೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.
ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಾಹನಗಳಿಗೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ವಾಹನಗಳು ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ ಕಾರ್ಯನಿರ್ವಹಿಸಲಿದ್ದು, ಅಪಘಾತ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸುವ ಕೆಲಸ ಮಾಡಲಿವೆ.
ಈ ಸಂದರ್ಭದಲ್ಲಿ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರಾದ ರಾಜು ಕಾಗೆ, KSRTC ಉಪಾಧ್ಯಕ್ಷ ರಿಜ್ವಾನ್ ನವಾಬ್, ಬಿಎಂಟಿಸಿ ಅಧ್ಯಕ್ಷ ಆರಾಧ್ಯ, ಉಪಾಧ್ಯಕ್ಷ ನಿಕೇತ್ ಮೌರ್ಯ, KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಇದ್ದರು.
