ಹಾವೇರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸವಣೂರು ಪಟ್ಟಣದ ಉರ್ದು ಶಾಲೆಯೊಂದರಲ್ಲಿ
‘ಡಿ. 10ರಂದು ನಡೆದಿದ್ದ ಘಟನೆ ಉಲ್ಲೇಖಿಸಿ ಶಾಲೆ ಮುಖ್ಯಶಿಕ್ಷಕ ರಾಜೇಸಾಬ ಖುದಾನಸಾಬ ಸಂಕನೂರ ಅವರು ಸವಣೂರು ಠಾಣೆಗೆ ದೂರು ನೀಡಿದ್ದರು. ಅದರನ್ವಯ ಶಿಕ್ಷಕ ಜಗದೀಶ್ ವಗ್ಗಣ್ಣನವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ, ಶಿಕ್ಷಕ ಜಗದೀಶ್ ಸಹ ದೂರು ನೀಡಿದ್ದು, ಅದರನ್ವಯ 22 ಮಂದಿ ಹಾಗೂ ಇತರರ ವಿರುದ್ಧ ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಶಾಲೆಯಲ್ಲಿ ಶಿಕ್ಷಕನನ್ನು ಥಳಿಸಿದ್ದವರು, ಚಪ್ಪಲಿಯಿಂದ ಹೊಡೆದಿದ್ದವರು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದವರನ್ನು ವಿಡಿಯೊ ಆಧರಿಸಿ ಪತ್ತೆ ಮಾಡಲಾಗಿದೆ. ಅದರನ್ವಯ 22 ಮಂದಿಯನ್ನು ಆರೋಪಿಯನ್ನಾಗಿ ಮಾಡಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ವಿದ್ಯಾರ್ಥಿನಿಯರಿಗೆ ಶಿಕ್ಷಕ ಜಗದೀಶ್ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಆರೋಪವಿರುವುದಾಗಿ ಮುಖ್ಯಶಿಕ್ಷಕ ದೂರಿದ್ದಾರೆ. ಆದರೆ, ಆರೋಪ ಸುಳ್ಳು ಎಂದು ಶಿಕ್ಷಕ ದೂರಿನಲ್ಲಿ ತಿಳಿಸಿದ್ದಾರೆ. ಎರಡೂ ದೂರಿನ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ತನಿಖೆಯಿಂದಲೇ ನಿಜಾಂಶ ತಿಳಿಯಬೇಕಿದೆ.
