ನವದೆಹಲಿ: ಬೆಂಗಳೂರಿಗೆ ಸೀಮಿತವಾಗಿದ್ದ ಬ್ರೇಕ್ ಪಾಸ್ಟ್ ಮೀಟಿಂಗ್ ರಾಜಕೀಯ ದೆಹಲಿಗೆ ಶಿಫ್ಟ್ ಆಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು, ಶಾಸಕರ ಜತೆಗೆ ಮೀಟಿಂಗ್ ನಡೆಸಿದ್ದಾರೆ.
ಕರ್ನಾಟಕ ಭವನದಲ್ಲಿ ನಡೆದ ಬ್ರೇಕ್ ಪಾಸ್ಟ್ ಸಭೆಯಲ್ಲಿ ಸಚಿವರಾದ ಆರ್ ಬಿ ತಿಮ್ಮಾಪುರ, ಮಾಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ. ಸಿ. ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಂಎಲ್ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು ಬಿ ವೆಂಕಟೇಶ್ ಭಾಗವಹಿಸಿದ್ದರು.
ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಡಿಸಿಎಂ ಮತ್ತು ಡಿಕೆಶಿ ದೆಹಲಿಯಲ್ಲಿ ನಡೆಯುತ್ತಿರುವ ಮತಗಳವು ಹೋರಾಟದಲ್ಲಿ ಭಾಗವಹಿಸಲು ತೆರಳಿದ್ದಾರೆ. ಆದರೆ, ಅವರೊಂದಿಗೆ ಕೆಲವು ಬೆಂಬಲಿಗ ಶಾಸಕರು, ಸಚಿವರು ತೆರಳಿದ್ದು, ಅಲ್ಲಿ ನಡೆದಿರುವ ಬ್ರೇಕ್ ಪಾಸ್ಟ್ ಮೀಟಿಂಗ್ ಚರ್ಚೆಯ ವಿಷಯವಾಗಿದೆ.
