ದೊಡ್ಡಬಳ್ಳಾಪುರ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ರಹ್ಮಾನಂದ ಗುರೂಜಿ ಮತ್ತು ಅವರ ಪತ್ನಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಬ್ರಹ್ಮಾನಂದ ಗುರೂಜಿ ಮತ್ತು ಅವರ ಪತ್ನಿ ಶಿಲ್ಪಾ ವಿರುದ್ಧ ಎಫ್ಐ ಆರ್ ದಾಖಲಿಸಲಾಗಿದೆ. ಸಂತ್ರಸ್ತ ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಮೊಬೈಲ್ ನಲ್ಲಿ ಕರೆ ಮಾಡಿ ಅವಾಚ್ಯವಾಗಿ ನಿಂದಿಸೊದ್ದು ಹಾಗೂ ಮಹಿಳೆಯನ್ನು ಲೈಂಗಿಕವಾಗಿ ತನ್ನೊಂದಿಗೆ ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದರು ಎಂಬ ಆರೋಪ ಕೇಳಿಬಂದಿವೆ. ಈ ಸಂಬಂಧ ಮಹಿಳೆಯೊಂದಿಗೆ ಸ್ವಾಮೀಜಿ ನಡೆಸಿರುವ ಮೊಬೈಲ್ ಸಂಭಾಷಣೆಯೂ ವೈರಲ್ ಆಗಿದೆ.
