ಗ್ರೇಟರ್ ಬೆಂಗಳೂರು ಆಯ್ತು, ಈಗ ಗ್ರೇಟರ್ ತುಮಕೂರು !

Share It

ಬೆಂಗಳೂರು: ಬೆಂಗಳೂರು ಮಾದರಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯನ್ನು ಉನ್ನತೀಕರಣಗೊಳಿಸಿ ಗ್ರೇಟರ್ ತುಮಕೂರು ಮಾಡಲು ಸರಕಾರ ತೀರ್ಮಾನಿಸಿದೆ.

ಈ ಕುರಿತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ ಮಾತನಾಡಿ, ಬೆಂಗಳೂರು ಬೃಹದಾಕಾರವಾಗಿ ಬೆಳೆದಿದೆ. ಹೀಗಾಗಿ, ಗ್ರೇಟರ್ ಬೆಂಗಳೂರು ಮಾಡಲಾಗಿದೆ. ಬೆಂಗಳೂರು ನಗರ ಈಗಾಗಲೇ ತುಮಕೂರು ವರೆಗೆ ಬೆಳೆದಿದೆ. ಈ ಹಿನ್ನೆಲೆಯಲ್ಲಿ ತುಮಕೂರನ್ನು ಗ್ರೇಟರ್ ತುಮಕೂರು ಆಗಿ ಮಾಡಲು ತೀರ್ಮಾನಿಸಲಾಗಿದೆ.

ಮಹಾನಗರ ಪಾಲಿಕೆಯಾಗಿರುವ ತುಮಕೂರು ಬೆಂಗಳೂರು ಮಹಾನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ತುಮಕೂರು ರಚಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ತಕ್ಕಂತೆ ಅಭಿವೃದ್ಧಿ ಮಾಡಲು ಸರಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.


Share It

You May Have Missed

You cannot copy content of this page