IPL ಉದ್ಘಾಟನಾ ಪಂದ್ಯವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ: ದುರಂತದ ನಂತರ ಮೊದಲ ಪಂದ್ಯಕ್ಕೆ ಸಿದ್ಧತೆ
ಬೆಂಗಳೂರು: ಬೆಂಗಳೂರು ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿIPL ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿತ್ತಾದರೂ, ಇದೀಗ ಉದ್ಘಾಟನಾ ಪಂದ್ಯವೇ ಬೆಂಗಳೂರಿನಲ್ಲಿ ನಡೆಯಲಿದೆ.
ವೆಂಕಟೇಶ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, IPL ಆಯೋಜನೆಗೆ ಸರಕಾರದ ಜತೆಗೆ ಮಾತುಕತೆ ಮಾಡಲಾಗಿದೆ. ಸಿಎಂ ಮತ್ತು ಡಿಸಿಎಂ ಒಪ್ಪಿಗೆ ಕೊಟ್ಟಿದ್ದಾರೆ. ಹೀಗಾಗಿ, ಉದ್ಘಾಟನಾ ಪಂದ್ಯವನ್ನೇ ಇಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.


