ವಸತಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಕ್ರಮ: ಎಚ್.ಸಿ.ಮಹದೇವಪ್ಪ

Share It

ಬೆಳಗಾವಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಬೇಕಾಗುವ ಡೆಸ್ಕ್ ಕಂ ಬೆಂಚ್ 5 ಸೀಟರ್, ಟು ಟೈರ್ ಕಾಟ್, ಹಾಸಿಗೆ, ದಿಂಬುಗಳು ಹಾಗೂ ಇನ್ನಿತರ ಪರಿಕರಗಳ ಸರಬರಾಜು ಆದೇಶವನ್ನು ನೀಡಲಾಗಿದೆ. ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕೊರತೆ ಕಂಡುಬಂದಲ್ಲಿ ಅನುದಾನದ ಲಭ್ಯತೆಯನುಸಾರ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದರು.

2025-26ನೇ ಸಾಲಿನ ಆಯವ್ಯಯದಲ್ಲಿ ವಸತಿ ಶಾಲೆಗಳಿಗೆ ಮೂಲಭೂತ ಸೌಲಭ್ಯಕ್ಕೆ ಅಗತ್ಯ ಪರಿಕರಗಳನ್ನು ಒದಗಿಸುವುದರ ಜೊತೆಗೆ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸೇರಿ ಒಟ್ಟು 26 ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು ವಸತಿ ಶಾಲೆಗಳ ಹೆಸರು, ಪ್ರವರ್ಗವಾರು ಶಾಲೆಗಳ ವರ್ಗೀಕರಣ ಮಾಡಿ ಪ್ರತಿ ಶಾಲೆಯ ತರಗತಿವಾರು 50 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ. ಅದರಂತೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ 26 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದರು.


Share It

You May Have Missed

You cannot copy content of this page