ವಾಲ್ಮೀಕಿ ನಿಗಮ ಹಗರಣ: ಬಿ.ನಾಗೇಂದ್ರ ಗೆ ಸೇರಿದ ಸ್ಥಿರಾಸ್ತಿ ವಶಪಡಿಸಿಕೊಂಡ ED

Share It

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ED ಮುಟ್ಟುಗೋಲು ಹಾಕಿಕೊಂಡಿದೆ.

ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿ 4 ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್​ಗಳಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ಈ ಆಸ್ತಿಗಳನ್ನು PMLA ಅಡಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ.

ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಶೆಲ್ ಘಟಕಗಳ ಮೂಲಕ ಅಕ್ರಮವಾಗಿ ಇತರೆಡೆ ವರ್ಗಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.


Share It

You May Have Missed

You cannot copy content of this page