ನಾಳೆ ದೆಹಲಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ: ಸಿಎಂ ಸ್ಥಾನ ಚರ್ಚೆಗೆ ಕುತೂಹಲಕಾರಿ ಟ್ವಿಸ್ಟ್ !
ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದು, ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.
ಹೈಕಮಾಂಡ್ ನಮ್ಮಿಬ್ಬರ ನಡುವೆ ಒಂದು ಒಪ್ಪಂದ ಮಾಡಿದೆ ಎಂದು ಡಿಕೆಶಿ ಹೇಳಿದ್ದರು. ಆದರೆ, ಅದು ಯಾವ ಒಪ್ಪಂದ ಎಂಬುದನ್ನು ಬಾಯಿಬಿಟ್ಟಿಲ್ಲ. ಆದರೆ, ಸಿದ್ದರಾಮಯ್ಯ ಮಾತ್ರ ಸದನದಲ್ಲಿಯೇ ಐದು ವರ್ಷ ನಾನೇ ಸಿಎಂ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಡಿಕೆಶಿ ಕಣ್ಣು ಕೆಂಪಾಗಿಸಿದ್ದರು.
ಈ ಹಿನ್ನೆಲೆಯಲ್ಲಿ ಡಿಸಿಎಂ ದೆಹಲಿ ಪ್ರವಾಸ ಕುತೂಹಲ ಮೂಡಿಸಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.


