ಬಳ್ಳಾರಿ ಗಲಭೆ: ಮೃತ ವ್ಯಕ್ತಿಯ ಪೋಸ್ಟ್ ಮಾರ್ಟಂ ಎರಡೆರಡು ಬಾರಿ ನಡೆಸಿದ್ಯಾಕೆ?
ಬೆಂಗಳೂರು: ಬಳ್ಳಾರಿ ಗಲಭೆಯ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದು, ಮೃತ ರಾಜಶೇಖರ ರೆಡ್ಡಿ ಶವವನ್ನು ಎರಡೆರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂದಿದ್ದಾರೆ.
ಘಟನೆಯ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಾತನಾಡಿದ ಅವರು, ಮೊದಲ ಬಾರಿಗೆ ಏನು ವರದಿ ಬಂತು? ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆಗೆ ಯಾರು ಒತ್ತಾಯಿಸಿದರು. ಯಾರ ಅನುಮತಿ ಪಡೆದು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಯಿತು ಎಂದು ಪ್ರಶ್ನೆ ಮಾಡಿದ್ದಾರೆ.
ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ತೆಗೆಯಲಾಗಲಿಲ್ಲ ಎಂಬ ಮಾಹಿತಿಯಿದೆ. ಇದನ್ನು ಸಮಗ್ರವಾಗಿ ತನಿಖೆ ಮಾಡುತ್ತೀರಾ ಅಥವಾ ನ್ಯಾಯ ಮರೆಮಾಚುತ್ತೀರಾ? ಎಂದು ಪ್ರಶ್ನೆ ಮಾಡಿದರು.


