ಮೈಸೂರು: ಪತ್ರಕರ್ತರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಜಂಟಿಯಾಗಿ ಆಯೋಜಿಸಿದ್ದ ಡಾ.ಕೆ.ಶಿವಕುಮಾರ್ ಅಭಿನಂದನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶಿವಕುಮಾರ್ ಅವರನ್ನು ಅಭಿನಂದಿಸಿ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳ, ಮುಖಂಡರುಗಳು ಹಾಗೂ ದಲಿತ ಸಂಘಟನೆಗಳ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

