ಹೊಸಕೋಟೆ : ಸೂಲಿಬೆಲೆ ಸರಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣಕ್ಕೆ ಪೂರಕವಾಗಿರುವ ಸೌಲಭ್ಯಗಳನ್ನು ಕಲ್ಪಿಸುವುದೇ ನಮ್ಮ ಗುರಿಯಾಗಿದೆ ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್ ಗೋಪಾಲಗೌಡ ಹೇಳಿದರು.
ಸೂಲಿಬೆಲೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾಲೇಜು ಅಭಿವೃದ್ದಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ.ಎನ್.ಬಚ್ಚೇಗೌಡರು ಹಾಕಿ ಕೊಟ್ಟಿರುವ ಮಾರ್ಗದಲ್ಲಿ ಅಭಿವೃದ್ದಿಯ ಹಾದಿಯಲ್ಲಿ ನಾವು ಸಾಗುತ್ತಿದ್ದೇವೆ. ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡರು ಸಹ ಶಿಕ್ಷಣ ಕ್ಷೇತ್ರದ ಆಭಿವೃದ್ದಿಗೆ ಹೆಚ್ಚಿನ ಕಾಳಜಿ ವಹಿಸಿದ್ದು, ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತೇವೆ. ಗ್ರಾಮೀಣ ಭಾಗದ ಮಕ್ಕಳ ಹಿತದೃಷ್ಟಿಯಿಂದ ಶಾಸಕರು ಹೆಚ್ಚು ಕಾಳಜಿ ವಹಿಸಿ ಸುಮಾರು ೨೫ ಕಂಪ್ಯೂಟರ್‌ಗಳನ್ನು ನೀಡಿದ್ದಾರೆ. ಉತ್ತಮ ಗುಣಮಟ್ಟದ ಲ್ಯಾಬ್ ನಿರ್ಮಿಸಿಕೊಟ್ಟಿದ್ದಾರೆ. ರಂಗಮ0ದಿರ ಕ್ರೀಡಾಂಗಣವು ನಿರ್ಮಾಣವಾಗಿದ್ದು, ಶಿಕ್ಷಣಕ್ಕೆ ಪೂರಕವಾದ ಪರಿಸರ ನಿರ್ಮಾಣವಾಗಿದೆ ಎಂದರು.
ಕಾಲೇಜಿನ ಅಭಿವೃದ್ದಿ ಸಮಿತಿಗೆ ನೂತನ ಸದಸ್ಯರನ್ನಾಗಿ ನಗರೇನಹಳ್ಳಿ ನಾಗರಾಜಪ್ಪ ಅವರನ್ನು ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಆಯ್ಕೆ ಮಾಡಿದರು.
ಇದೇ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚಿಸಿ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.
ಪ್ರಾಂಶುಪಾಲ ಮಂಜುನಾಥ್, ಉಪನ್ಯಾಸಕರಾದ ಸುಬ್ರಮಣಿ, ಕುಮಾರ್, ಅಭಿವೃದ್ದಿ ಸಮಿತಿ ಸದಸ್ಯರಾದ ಎಂ.ಪ್ರಶಾ0ತ್, ಬೆಟ್ಟಹಳ್ಳಿ ಗೋಪಿನಾಥ್ ಹಾಜರಿದ್ದರು

