ಉಪಯುಕ್ತ ಸುದ್ದಿ

KSRTC ಯಿಂದ ಮತ್ತೊಂದು ವಿಕ್ರಮ9 ರಾಷ್ಟ್ರ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

Share It

ಬೆಂಗಳೂರು: ದೇಶದಲ್ಲಿಯೇ ಅತ್ಯುತ್ತಮ ಸಾರಿಗೆ ವ್ಯವಸ್ಥೆಗೆ ಹೆಸರುವಾಸಿಯಾದ KSRTC ರಾಷ್ಟ್ರಮಟ್ಟದ 9 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಇದರಲ್ಲಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024 ಸೇರಿವೆ.

AdWorld Showdown ಪ್ರಶಸ್ತಿಗಳು ಈ ಕೆಳಗಿನ ವಿಭಾಗಗಳಲ್ಲಿ ಲಭಿಸಿರುತ್ತದೆ.

  1. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ- ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
  2. ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ.
  3. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ
  4. ಪಲ್ಲಕ್ಕಿ ಬಸ್ಸುಗಳ -ಅತ್ಯುತ್ತಮ ಗ್ರಾಹಕ ಸ್ವೀಕೃತಿ
  5. ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ
  6. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು- ವರ್ಷದ ಅತ್ಯುತ್ತಮ ಬ್ರ್ಯಾಂಡ್

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿರುತ್ತದೆ.

PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ. ನಿಗಮಕ್ಕೆ AdWorld ಪ್ರಶಸ್ತಿಗಳನ್ನು ನವದೆಹಲಿಯಲ್ಲಿ, ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿ.ಆರ್.ಎಸ್.ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.


Share It

You cannot copy content of this page