ಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ರಾಜೇಂದ್ರ ದೊಡ್ಡಮಗ್ಗೆ ಆಯ್ಕೆ

Share It

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಅವರ ಬಣದ ರಾಜ್ಯ ಕಾರ್ಯದರ್ಶಿಯಾಗಿ ರಾಜೇಂದ್ರ ದೊಡ್ಡಮಗ್ಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಸ್ವತಃ ರಾಜೇಂದ್ರ ದೊಡ್ಡ ಮಗ್ಗೆ ಅವರನ್ನು ಅಭಿನಂದಿಸಿದ್ದಾರೆ.

ರಾಜೇಂದ್ರ ದೊಡ್ಡಮಗ್ಗೆ ಹಾಸನದ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆಯವರಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆಯ ಹಾಸನ ಜಿಲ್ಲಾ ವಕ್ತಾರರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಕನ್ನಡ ಪರ ಹೋರಾಟಗಳು ಸೇರಿದಂತೆ ಸಮಾಜದಲ್ಲಿ ನೊಂದವರ ಪರವಾಗಿ ಹೋರಾಟ ಮಾಡಿತ್ತಾ, ಸಮಾಜಸೇವೆಯಲ್ಲಿಯೂ ತೊಡಗಿಸಿಕೊಂಡಿರುವ ರಾಜೇಂದ್ರ ಅವರಿಗೆ ಈ ಹುದ್ದೆ ಸಿಕ್ಕಿರುವುದು ಅರ್ಹವಾಗಿಯೇ ಇದೆ ಎನ್ನಬಹುದು.

ಈ ಕುರಿತು ಮಾತನಾಡಿರುವ ಅವರು, ನನಗೆ ರಾಜ್ಯ ಕಾರ್ಯದರ್ಶಿಯಂತಹ ದೊಡ್ಡ ಹುದ್ದೆಯನ್ನು ಕೊಟ್ಟಿದ್ದಕ್ಕಾಗಿ ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರಿಗೆ ನಾನು ಅಭಾರಿಯಾಗಿದ್ದೇನೆ. ಅದೇ ರೀತಿ ಅವರು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಸಂಘಟನೆಯನ್ನು ಮತ್ತಷ್ಟು ಗಟ್ಟಿಯಾಗಿ ಕಟ್ಟುವ ನಿಟ್ಟಿನಲ್ಲಿ ಅವರ ಜತೆಗೆ ಹಗಲಿರುಳು ಶ್ರಮಿಸುತ್ತೇನೆ ಎಂದಿದ್ದಾರೆ.


Share It

You cannot copy content of this page