ಆರೋಗ್ಯ ಸುದ್ದಿ

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಏರುಪೇರು: ಮಣಿಪಾಲ್ ಆಸ್ಪತ್ರೆಗೆ ದಾಖಲು

Share It

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಕುಸಿದುಬಿದ್ದಿದ್ದು, ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಸಂತೋಷ್ ಹೆಗ್ಡೆ ಅವರು ಭಾಷಣ ಮಾಡಿದ ನಂತರ ವಾಂತಿ ಮಾಡಿಕೊಂಡರು. ತಕ್ಷಣವೇ ಕುಸಿದುಬಿದ್ದಿದ್ದು, ಕಾರ್ಯಕ್ರಮದಲ್ಲಿದ್ದ ವೈದ್ಯ ಡಾ. ರಮೇಶ್ ಬಾಬು ಅವರಿಗೆ ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ನೀಡಿದರು ಎನ್ನಲಾಗಿದೆ.

ಸ್ಪೀಕರ್ ಯು.ಟಿ. ಖಾದರ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಕಾರಿನಲ್ಲಿಯೇ ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದ್ದು, ಸಧ್ಯಕ್ಕೆ ಯಾವುದೇ ತೊಂದರೆಯಿಲ್ಲ ಎಂದು ತಿಳಿಸಿದ್ದಾರೆ.


Share It

You cannot copy content of this page