ರಾಜಕೀಯ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಪುನರ್ ಆಯ್ಕೆಗೆ ಯಾವುದೇ ಮನವಿ ಇಲ್ಲ: ಸ್ಪಷ್ಟನೆ ನೀಡಿದ ಕುಮಾರಸ್ವಾಮಿ

Share It

ಬೆಂಗಳೂರು: ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸಬೇಕೆಂದು ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ತಾವು ಮನವಿ ಮಾಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಮ್ಮ ಸಹಯೋಗದ ಪಕ್ಷವಾದ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ 63 ಸ್ಥಾನಗಳನ್ನು ಹೊಂದಿದೆ. ಯಾರಿಗೆ ಅವಕಾಶ ನೀಡಬೇಕು ಎಂಬ ನಿರ್ಧಾರ ಸಂಪೂರ್ಣವಾಗಿ ಆ ಪಕ್ಷದ್ದಾಗಿದೆ. ಆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ರಾಜ್ಯಸಭಾ ಸದಸ್ಯತ್ವದ ಅವಧಿ ಮುಗಿಯುವ ಹಿನ್ನೆಲೆಯಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಈ ಸ್ಪಷ್ಟನೆ ನೀಡಿದ್ದಾರೆ. “ನಾನಾಗಲೀ, ನನ್ನ ತಂದೆಯವರಾಗಲೀ ಈ ಸ್ಥಾನದ ಬಗ್ಗೆ ಯಾರೊಂದಿಗೂ ಯಾವುದೇ ಮಾತುಕತೆ ನಡೆಸಿಲ್ಲ. ಬೇರೆಯವರ ಅವಕಾಶವನ್ನು ನಾವು ಕಸಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ” ಎಂದು ಒಂದು ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಅವರು ವಿವರಿಸಿದರು.


Share It

You cannot copy content of this page