ಉಪಯುಕ್ತ ಸುದ್ದಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ

Share It

ಕರ್ನಾಟಕ ಸರ್ಕಾರವು ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆಗಾಗಿ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ.

ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಹಾಗೂ ಸ್ಥಳೀಯ ಆಡಳಿತದ ಮೇಲ್ವಿಚಾರಣೆಯನ್ನು ಬಲಪಡಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.

ಹೊಸ ನೇಮಕಾತಿಯ ಪ್ರಕಾರ:

ಸುಬೋದ್ ಯಾದವ್ (ಭಾ.ಆ.ಸೇ) – ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ – ಕಲಬುರಗಿ ಜಿಲ್ಲೆಗೆ

ಸಲ್ಮಾ ಕೆ. ಫಾಹಿಮ್ (ಭಾ.ಆ.ಸೇ) – ಕಾರ್ಮಿಕ ಇಲಾಖೆಯ ಕಾರ್ಯದರ್ಶಿ – ಕೋಲಾರ ಜಿಲ್ಲೆಗೆ

ಆರ್ . ಗಿರೀಶ್ (ಭಾ.ಆ.ಸೇ) – ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ – ಚಿಕ್ಕಮಗಳೂರು ಜಿಲ್ಲೆಗೆ

ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದ ಅಂಶಗಳ ವರದಿಯನ್ನು DIS portal ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಲಾಗಿದೆ. ಈ ಆದೇಶವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಕಲ್ಪನಾ ಅವರು ಸಹಿ ಮಾಡಿ ಪ್ರಕಟಿಸಿದ್ದಾರೆ.


Share It

You cannot copy content of this page