ಬೆಂಗಳೂರು: ಆಡಳಿತಾತ್ಮಕ ಹಿತದೃಷ್ಟಿಯಿಂದ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಹಿರಿಯ ಐಎಎಸ್ ಅಧಿಕಾರಿ ಮಂಜುನಾಥ್ ವಾರ್ತಾ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಈ ಹಿಂದೆ ಅವರು ಕಾರ್ಯನಿರ್ವಹಿಸುತ್ತಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ಮಂಜುಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ.
ಉಳಿದಂತೆ ಮನೋಜ್ ಜೈನ್ ಅವರನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ, ಡಾ ತ್ರಿಲೋಕ ಚಂದ್ರ ಅವರನ್ನು ಸಾಂಖಿಕ, ಯೋಜನೆ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಯ ಕಾರ್ಯದರ್ಶಿಯಾಗಿ, ಪೂರ್ಣಿಮಾ ಬಿ ಆರ್ ಅವರನ್ನು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

