ಬೆಂಗಳೂರು: ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು, ತನಿಖೆ ನೀಡುವಂತೆ ಲೋಕಾಯುಕ್ತಗೆ ಸೂಚನೆ ನೀಡಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಲ್ಲಿ ದಾಖಲಾದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, FIR ದಾಖಲಿಸಿಕೊಂಡು ತನಿಖೆ ನಡೆಸುವಂತೆ ಹಾಸನ ಲೋಕಾಯುಕ್ತ SP ಗೆ ಸೂಚಿಸಿದೆ.
ಹಾಸನದಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹರಿಸೊಡ್ಡ ಪ್ರಿಯಂ ಗೌಡ ಆನಂತರ ಸೋಲು ಕಂಡಿದ್ದರು. ಪ್ರಸ್ತುತ ಬಿಜೆಪಿ ಉಪಾಧ್ಯಕ್ಷರಾಗಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ್ದಾರೆ ಎಂಬ ಆರೋಪದಲ್ಲಿ ಖಾಸಗಿ ದೂರು ದಾಖಲಾಗಿತ್ತು.
ಚುನಾವಣ ಸಂದರ್ಭದಲ್ಲಿ ಸಲ್ಲಿಕೆ ಮಾಡಿದ್ದ ಅಫಿಡವಿಟ್ ನ ಆಧಾರದಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಲ್ಲಿ ಸಂದೀಪ್ ಎಂಬುವವರು ನೀಡಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ತನಿಖೆ ನಸೆಸುವಂತೆ ಲೋಕಾಯುಕ್ತ SP ಗೆ ಆದೇಶಿಸಿದೆ.

