ಕ್ರೀಡೆ ಸುದ್ದಿ

ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ;ಪಾಕ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ!

Share It

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿಂದು ನಡೆದ ಚಾಂಪಿಯನ್ಸ್ ಟ್ರೋಫಿ 5ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಇದರೊಂದಿಗೆ ಈ ಟೂರ್ನಿಯಲ್ಲಿ ಪಾಕಿಸ್ತಾನ ಈ ಸೋಲಿನೊಂದಿಗೆ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ.

ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ 42.3 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು. ತಮ್ಮ ಏಕದಿನ ವೃತ್ತಿಜೀವನದ 51 ನೇ ಶತಕ ದಾಖಲಿಸಿದ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗುಳಿದರು.

43ನೇ ಓವರ್​ನ 3ನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಶತಕ ದಾಖಲಿಸಿದರು. ಜೊತೆಗೆ ಭಾರತಕ್ಕೆ ಸತತ 2ನೇ ಗೆಲುವಿನ ಮೂಲಕ ಸೆಮಿಫೈನಲ್ ಪ್ರವೇಶಿಸಲು ಮಹತ್ವದ ಗೆಲುವು ತಂದರು. ಕಡೆಯಲ್ಲಿ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಅಜೇಯ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ಅವರ ಪಾಲಾಯಿತು.


Share It

You cannot copy content of this page