ಅಪರಾಧ ಸುದ್ದಿ

ಬೆಂಗಳೂರು ಸೇರಿ ರಾಜ್ಯದ 7 ಕಡೆ ಲೋಕಾಯುಕ್ತ ದಾಳಿ!

Share It

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಈ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ದಾಳಿ…
ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಂಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ 3 ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ AEE ಬೆಸ್ಕಾಂ, ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ಬೆಂಗಳೂರಿನ ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.


Share It

You cannot copy content of this page