ಬೆಂಗಳೂರು: ಜತೆಯಲ್ಲೇ ಕಂಠಪೂರ್ತಿ ಕುಡಿದ ಸ್ನೇಹಿತರಿಬ್ಬರ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೆಳಗೊಳ ಗ್ರಾಮದ ಮೋಹನ್ ಕುಮಾರ್ (44) ಮೃತ ವ್ಯಕ್ತಿಯಾಗಿದ್ದು, ಆತನ ಸ್ನೇಹಿತನಾದ ರವಿಚಂದ್ರ ಎಂಬಾತನೇ ಕೊಲೆ ಮಾಡಿದ್ದಾನೆ. ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.