ಬೆಂಗಳೂರು: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್ ರೈಲು ಕಸವನ್ನು ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ.
ರೈಲು ಸಮೀಪಿಸುತ್ತಿರುವುದನ್ನು ಕಾರ್ಮಿಕರು ಗಮನಿಸದೇ ಇರದಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ನಾಲ್ಕನೆಯವರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಮೀಪದ ಭಾರತಪುಳ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.