ಬೆಂಗಳೂರು: ಬಿಟಿಎಂ ವಿಧಾನಸಭೆ ಕ್ಷೇತ್ರ ಮಡಿವಾಳ ವಾರ್ಡ್ ಹೊಸೂರು ಮುಖ್ಯರಸ್ತೆಯಲ್ಲಿ ಶಾಸಕರ ವಿಶೇಷ ಅನುದಾನದಡಿಯಲ್ಲಿ ಪಾದಚಾರಿ ಮಾರ್ಗ, ಚರಂಡಿ ಬದಿಯಲ್ಲಿ ಹೂಳು ತೆರವುಗೊಳಿಸುವುದು ಹಾಗೂ ಹೊಸದಾಗಿ ಡಾಂಬರೀಕರಣ ಮಾಡುವ ಕಾಮಗಾರಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಅನುಮಾನಗಳನ್ನು ಸರಕಾರ ನೀಡಿದೆ. ಶಾಸಕರ ಅನುದಾನ, ಬಿಬಿಎಂಪಿ ಅನುದಾನ ಸೇರಿ ಸರಕಾರದ ಅನುದಾನ ಬಳಸಿಕೊಂಡು ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಇದಕ್ಕೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಸ್ಪಂದಿಸಿ ಕೆಲಸ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.
ಮಾಜಿ ಮಹಾಪೌರರಾದ ಬಿ .ಎನ್ . ಮಂಜುನಾಥ್ ರೆಡ್ಡಿ, ಮಾಜಿ ಪಾಲಿಕೆ ಸದಸ್ಯರಾದ ಎಂ.ಚಂದ್ರಪ್ಪ, ಬಿಬಿಎಂಪಿ, ಬಿಡಿಎ ಹಾಗೂ ಜಲಮಂಡಳಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು , ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.