ಬೆಂಗಳೂರು: ಸಾರ್ವಜನಿಕರ ಜತೆಗೆ ಪೊಲೀಸರು ನಡೆದುಕೊಳ್ಳುವ ರೀತಿಯ ಕುರಿತು ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸರಕಾರ ಪೊಲೀಸರಿಗೆ ಸೌಜನ್ಯದ ಪಾಠ ಶುರು ಮಾಡಿದೆ.
ಪೊಲೀಸರು ಸಾರ್ವಜನಿಕರು ದೂರು ನೀಡಲು ಪೊಲೀಸ್ ಠಾಣೆಗೆ ಬಂದಾಗ ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬ ಕುರಿತು ಸುತ್ತೋಲೆ ಹೊರಡಿಸಿದೆ. ಡಿಐಜಿ ಕಚೇರಿಯಿಂದ ಹೊರಡಿಸಿರುವ ಸುತ್ತೋಲೆಯಲ್ಲಿ ಪೊಲೀಸರು ನಡೆದುಕೊಳ್ಳುವ ರೀತಿ-ನೀತಿಯ ಬಗ್ಗೆ ಉಲ್ಲೇಖಿಸಲಾಗಿದೆ.
ಪೊಲೀಸರ ವರ್ತನೆಯ ಬಗ್ಗೆ ಮಾನವ ಹಕ್ಕುಗಳ ಆಯೋಗ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂತಹದ್ದೊಂದು ಸುತ್ತೋಲೆ ಹೊರಡಿಸಲಾಗಿದೆ. ಠಾಣೆಗೆ ಬರುವ ಜನರ ಜತೆಗೆ ನಡೆದುಕೊಳ್ಳುವ ರೀತಿ ಮತ್ತು ಅವರ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.