ಅಪರಾಧ ಸುದ್ದಿ

ನಡು ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ

Share It

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ. ಜಂಗಮಕೋಟೆ ಮೂಲದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.

ಆಕೆಯನ್ನು ಯಾರೋ ದುಷ್ಕರ್ಮಿಗಳು ದೈಹಿಕವಾಗಿ ದುರ್ಬಳಕೆ ಮಾಡಿ ಗರ್ಭಿಣಿಯನ್ನಾಗಿ ಮಾಡಿದ್ದರು ಎಂಬ ಆರೋಪ ಕೇಳಿಬಂದ ಇದೇ.

ಮಾನಸಿಕವಾಗಿ ಅಸ್ವಸ್ಥಳಾಗಿದ್ದ ರೇಣುಕಾ, ಶಿಡ್ಲಘಟ್ಟದ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು. 8 ತಿಂಗಳ ಗರ್ಭಿಣಿಯಾಗಿದ್ದ ಆಕೆ, ರೈಲ್ವೆ ನಿಲ್ದಾಣದ ಬಳಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದಿಕ್ಕಿಲ್ಲದವರಿಗೆ ಸೂಕ್ತ ರಕ್ಷಣೆ ಕೊರತೆಯನ್ನು ಎತ್ತಿ ತೋರಿಸಿದೆ. ರೇಣುಕಾಳ ದಾರುಣ ಅಂತ್ಯವು ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ಈ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯದ ಜತೆಗೆ, ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯ ಒದಗಿಸಿ, ಮಾನವೀಯತೆ ಮರೆದಿದ್ದಾರೆ. ಈ ಕಾರ್ಯಕ್ಕೆ ಸ್ಥಳೀಯರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೇಣುಗೋಪಾಲ್‌ರಿಗೆ ಮೆಚ್ಚುಗೆ ವ್ಯಕ್ತವಾಗಿದೆ.


Share It

You cannot copy content of this page