ಬೆಂಗಳೂರು ಕಾಲ್ತುಳಿತ ಪ್ರಕರಣ: ಸರಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಮತ್ತೊಂದು ದೂರು

Share It

ಬೆಂಗಳೂರು:RCB ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸರಕಾರದ ಮುಖ್ಯಕಾರ್ಯದರ್ಶಿ, RCB ತಂಡದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಉಮೇಶ್ ಎಂಬುವವರು ದೂರು ದಾಖಲಿಸಿದ್ದಾರೆ. RCB ಮ್ಯಾನೇಜ್ಮೆಂಟ್, ಡಿಎನ್ಎ ಸಂಸ್ಥೆ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಅವರ ವಿರುದ್ಧ ದೂರು ದಾಖಲಾಗಿದೆ.

ಸಂಭ್ರಮಾಚರಣೆ ವೇಳೆ ಉಂಟಾದ ನೂಕುನುಗ್ಗಲಿನಿಂದ ಕಬ್ಬನ್ ಪಾರ್ಕ್ ಗೆ ಹಾನಿಯಾಗಿದೆ. ಸಾವಿರಾರು ಗಿಡಗಳು ನಾಶವಾಗಿವೆ. ಹೀಗಾಗಿ, ಆಯೋಜಕರು ಮತ್ತು ಅನುಮತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಮೂರ್ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಸರಕಾರ ನ್ಯಾಯಂಗ ತನಿಖೆಗೂ ಆದೇಶ ನೀಡಿದೆ. ನಗರ ಪೊಲೀಸ್ ಆಯುಕ್ತರು ಸೇರಿ ಅನಶೆಕರ ತಲೆದಂಡವೂ ಆಗಿದೆ. ಇದೀಗ ಮುಖ್ಯ ಕಾರ್ಯದರ್ಶಿ ಅವರ ವಿರುದ್ಧ ಈ ದೂರು ದಾಖಲಾಗಿದ್ದು, ಕುತೂಹಲ ಮೂಡಿಸಿದೆ.


Share It

You May Have Missed

You cannot copy content of this page