ಜನವರಿ 22,23 ರಂದು ತುರ್ತು ವಿದಾನಸಭಾ ಅಧಿವೇಶನ?
ಬೆಂಗಳೂರು: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಭಾ ಜೀ ರಾಮ್ ಜೀ ಎಂದು ಕೇಂದ್ರ ಸರ್ಕಾರ ಬದಲಿಸಿದ್ದು,ಮಹಾತ್ಮಾ ಗಾಂಧಿ ಹೆಸರನ್ನು ಕೈ ಬಿಟ್ಟಿದ್ದಕ್ಕಾಗಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಡಿಸುತ್ತಿದೆ.
ಈ ಹಿನ್ನೆಲೆಯಲ್ಲಿಯೇ ಜನವರಿ 22 ಮತ್ತು 23 ರಂದು ಎರಡು ದಿನಗಳ ತುರ್ತು ವಿಧಾನಮಂಡಲ ಅಧಿವೇಶನ ನಡೆಸಿ, ಚರ್ಚಿಸಲು ಸರ್ಕಾರ ತೀರ್ಮಾನ ನಡೆಸಿದೆ.


