ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡ ಡಿ ಕೆ ಶಿವಕುಮಾರ್

Share It

ಬೆಂಗಳೂರು: ಸಿಎಂ ಸ್ಥಾನ ಬದಲಾವಣೆ ಪ್ರಕ್ರಿಯೆ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ನಡೆದ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದಿದ್ದು ಕುತೂಹಲ ಮೂಡಿಸಿದೆ

ಈ ಮೂಲಕ ತಾವು ಮುಂದೆ ಸಿದ್ದರಾಮಯ್ಯ ಅವರ ಸಲಹೆಯಂತೆ ನಡೆಯುತ್ತೇನೆ ಎಂದು ಬಿಂಬಿಸುವ ಪ್ರಯತ್ನವನ್ನು ಡಿ ಕೆ ಶಿವಕುಮಾರ್ ಮಾಡಿದ್ದು, ಅಧಿಕಾರ ಹಂಚಿಕೆಯ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕುತೂಹಲ ಮೂಡಿಸಿದೆ

ಸಿದ್ಧರಾಮಯ್ಯ ಅಧಿಕಾರ ಹಸ್ತಾಂತರ ಮಾಡುವಲ್ಲಿ ಮೀನಮೇಷ ಮಾಡುತ್ತಿದ್ದಾರೆ. ತಮ್ಮ ಆಪ್ತರೊಬ್ಬರಿಗೆ ಸಿಎಂ ಸ್ಥಾನ ಕೊಡಿಸುವ ಪ್ರಯತ್ನದಲ್ಲಿ ಸಿದ್ದರಾಮಯ್ಯ ಇದ್ದು, ಈ ಹಿನ್ನೆಲೆಯಲ್ಲಿ ಅವರ ಮನವೊಲಿಸುವ ಪ್ರಯತ್ನವನ್ನು ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ


Share It

You cannot copy content of this page