ಅಪರಾಧ ಸುದ್ದಿ

ಯಾದಗಿರಿ: ಬಟ್ಟೆ ತೊಳೆಯುವ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು

Share It

ಯಾದಗಿರಿ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಬಟ್ಟೆ ತೊಳೆಯಲು ಬಾವಿ ಬಳಿ ಹೋಗಿದ್ದರು.

ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಮೃತದೇಹಗಳನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page